ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಕಾಮುಕರಿಂದ ಅತ್ಯಾಚಾರ, ಕೊಲೆ…!

ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಕಾಮುಕರಿಂದ ಅತ್ಯಾಚಾರ, ಕೊಲೆ…!

ಶೇರ್‌ ಮಾಡಿ
 •  
 •  
 •  
 •  
 •  
 •  

ಚಿತ್ರದುರ್ಗ: ಬಹಿರ್ದೆಸೆಗೆ ಹೋಗಿದ್ದ ಅಪ್ರಾಪ್ತೆಯ ಮೇಲೆ ಕಾಮುಕರು ಅಟ್ಟಹಾಸ ಮೇರೆದು ಕತ್ತು ಹಿಸುಕಿ ಕೊಲೆಗೈದಿರುವ ಘಟನೆ ಕೋಟೆನಾಡಿನಲ್ಲಿ ನಡೆದಿದೆ‌.
ಚಿತ್ರದುರ್ಗ ಜಿಲ್ಲೆಯಲ್ಲಿ ಶೌಚಾಲಯಗಳ ವ್ಯವಸ್ಥೆ ಇರದ ಕಾರಣ ಬಯಲು ಶೌಚಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಅತ್ಯಾಚಾರವೆಸಗಿ ನಂತರ ಹತ್ಯೆಗೈದು ಪರಾರಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅತ್ಯಾಚಾರವೆಸಗಿ‌ದ ಬಳಿಕ‌ ಬಾಲಕಿಯನ್ನು ಉಸಿರುಗಟ್ಟಿಸಿ ಹತ್ಯೆ ಗೈದಿರುವ ಶಂಕಿಸಲಾಗಿದ್ದು ಘಟನೆ ನಡೆದ ಸ್ಥಳಕ್ಕೆ ಚಿತ್ರದುರ್ಗ ಎಸ್ಪಿ ರಾಧಿಕಾ, ಭೇಟಿ ನೀಡಿದ ತನಿಖೆ ಚುರುಕುಗೊಳಿಸಿದ್ದಾರೆ.ಇನ್ನು ಸ್ಥಳದಲ್ಲೇ ಚಪ್ಪಲಿ ಬಿಟ್ಟು ಆರೋಪಿ ಪರಾರಿಯಾಗಿದ್ದು, ಆರೋಪಿಗಳನ್ನು ಆದಷ್ಟು ಬೇಗ ಹೆಡೆಮುರಿ ಕಟ್ಟಬೇಕಿದೆ.

ಈ ಬಗ್ಗೆ ಜನಾದೇಶವಾಣಿಗೆ ಪ್ರತಿಕ್ರಿಯೆ ನೀಡಿದ ಚಿತ್ರದುರ್ಗ ಎಸ್ಪಿ ರಾಧಿಕ ಅವರು, ಜಿಲ್ಲೆಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿದ್ದಾರೆ.
ಮೃತಪಟ್ಟ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಾಲಕಿಯ ವರದಿ ಬಂದ ತಕ್ಷಣ ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸುವುದಾಗಿ ಎಸ್ಪಿ ಭರವಸೆ ನೀಡಿದ್ದಾರೆ.


ಶೇರ್‌ ಮಾಡಿ
 •  
 •  
 •  
 •  
 •  
 •  

Leave a Reply

Your email address will not be published. Required fields are marked *