ಕೊಪ್ಪಳ: ಕಾಮದಹನ ಹಾಗೂ ಹೋಳಿ ಹಬ್ಬದ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಕೋವಿಡ್-19 ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕೆ ಹಾಗೂ ಆರೋಗ್ಯ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯ ಮಾರ್ಚ್. 22ರ ಸುತ್ತೋಲೆಯಂತೆ ಜಿಲ್ಲಾ ಟಾಸ್ಕ್ಫೋರ್ಸ್ ಸಭೆಯ ತೀರ್ಮಾನದಂತೆ ಕೊಪ್ಪಳ ಜಿಲ್ಲೆಯಾದ್ಯಂತ ಕಾಮದಹನ ಹಾಗೂ ಹೋಳಿ ಹಬ್ಬದ ಪ್ರಯುಕ್ತ ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆ ಅಪಾಯವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ-1897 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ನಿಯಮಗಳು-2020 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 30, 34ರ ಪ್ರಕಾರ ಸುರಕ್ಷತೆಗೆ ಮಾರ್ಚ್. 28 ಮತ್ತು 29 ರಂದು ಹಲವು ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಹೊರಡಿಸಿದ್ದಾರೆ.
ಮುಂಜಾಗ್ರತಾ ಕ್ರಮಗಳು;
ಹಬ್ಬ ಆಚರಣೆ ವೇಳೆ 10 ಕ್ಕಿಂತ ಹೆಚ್ಚು ಜನರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು-ಗುAಪಾಗಿ ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿ ಬಣ್ಣದ ನೀರನ್ನು ಎರಚುವಂತಿಲ್ಲ. ತುಂಗಭದ್ರ ನದಿ ಪಾತ್ರದ ಸ್ಥಳಗಳಲ್ಲಿ ಕಾಲುವೆಗಳಲ್ಲಿ ಗುಂಪು-ಗುAಪಾಗಿ ಸೇರಿ ನೀರು ಎರಚುವುದು ಹಾಗೂ ನೀರನ್ನು ಮಲಿನಗೊಳಿಸುವಂತಿಲ್ಲ. ಗುಂಪು-ಗುAಪಾಗಿ ಜನ ಸೇರಿ ಗಡಿಗೆ ಹಾಗೂ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಆಚರಿಸುವಂತಿಲ್ಲ ಹಾಗೂ ಸಾರ್ವಜನಿಕರು ತಮ್ಮ ಮನೆಗಳಲ್ಲಿ, ಸಾರ್ವಜನಿಕವಾಗಿ ಗುಂಪು-ಗುAಪಾಗಿ ಹೆಚ್ಚು ಜನರು ಸೇರದೇ ಸರಳವಾಗಿ ಹಬ್ಬವನ್ನು ಆಚರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮ ಜರುಗಿಸಲಾಗುವುದು. ಈ ಆದೇಶದನ್ವಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ. ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ಉಪವಿಭಾಗಾಧಿಕಾರಿ, ಜಿಲ್ಲೆಯ ಎಲ್ಲ ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ತಾ.ಪಂ.ಮುಖ್ಯಾಧಿಕಾರಿಗಳು ಹಾಗೂ ಸಂಬAಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಕಾಮದಹನ ಹಾಗೂ ಹೋಳಿ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಡಿಸಿ ಆದೇಶ…
RELATED ARTICLES