“ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು”.

“ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು”.

ಶೇರ್‌ ಮಾಡಿ
 •  
 •  
 •  
 •  
 •  
 •  

ವಿಜಾಪುರ :- ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಮ್ಮ ಬಣ) ಘಟಕವು ,ಚಿತ್ರದುರ್ಗ ಜಿಲ್ಲೆಯ ಬ್ರಹ್ಮಸಾಗರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಇಸಾಮುದ್ರಾ ಗ್ರಾಮದ ಶಶಿಕಲಾ ಉಪ್ಪಾರ್ ಸಮಾಜದ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದಿದ್ದು. ಈ ಪ್ರಕರಣ ಖಂಡಿಸಿ ಮಾನ್ಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಪದಾಧಿಕಾರಿಗಳ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆ ನೇತೃತ್ವ ವಹಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಮ್ಮ ಬಣ) ಜಿಲ್ಲಾ ಅಧ್ಯಕ್ಷರಾದ ಶೇಷರಾವ್ ಮಾನೆ ಮನೆಮಾತನಾಡಿ ಭಾರತದ ಮೂಲೆ ಮೂಲೆಯಲ್ಲಿ ಅಪ್ರಾಪ್ತ ಬಾಲಕಿಯರ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿದೆ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಪ್ರಕರಣಗಳು ನಡೆಯಬಾರದು ಖಂಡನೀಯ, ಬಾಲಕಿಯ ಕುಟುಂಬಕ್ಕೆ ರಕ್ಷಣೆ ನೀಡಿ ಸೂಕ್ತ ಪರಿಹಾರ ನೀಡಬೇಕು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದರು.
ಕರವೇ ಮಹಿಳಾ ಘಟಕದ ಅಧ್ಯಕ್ಷೆ ಭಾರತಿ ಸಾಲಿ ಮಾತನಾಡಿ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ-ಕೊಲೆ ದೌರ್ಜನ್ಯಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕೆಂದರು.
ಗೌರವಾಧ್ಯಕ್ಷ ನ್ಯಾಯವಾದಿ ಎಂ.ಎಂ ತಿಲಾಸಿ ರಾಜ್ಯ ಕಾರ್ಯಾಧ್ಯಕ್ಷ ಗುಲಾಲ್ ಭಂಡಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಕೆ ಬನ್ನಟ್ಟಿ ಮಾತನಾಡಿದರು.


ಶೇರ್‌ ಮಾಡಿ
 •  
 •  
 •  
 •  
 •  
 •  

Leave a Reply

Your email address will not be published. Required fields are marked *