ಕೃಷಿ ಸಂಜೀವಿನಿ ವಾಹನಗಳ ಲೋಕಾರ್ಪಣೆ.. ಸ್ವಾಭಿಮಾನಿ ರೈತರ ಕಾರ್ಡ ರಾಜಾಹುಲಿಯಿಂದ ವಿತರಣೆ…

ಕೃಷಿ ಸಂಜೀವಿನಿ ವಾಹನಗಳ ಲೋಕಾರ್ಪಣೆ.. ಸ್ವಾಭಿಮಾನಿ ರೈತರ ಕಾರ್ಡ ರಾಜಾಹುಲಿಯಿಂದ ವಿತರಣೆ…

ಶೇರ್‌ ಮಾಡಿ
 •  
 •  
 •  
 •  
 •  
 •  

ಕೊಪ್ಪಳ: ಕೊಪ್ಪಳ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ (ಕೃಷಿ ಸಂಜೀವಿನಿ) ವಾಹನಗಳನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪನವರು ಹಸಿರು ನೀಶಾನೆ ತೋರಿಸುವುದರ ಮೂಲಕ ಲೋಕಾರ್ಪಣೆಗೊಳಿಸಿ, ಸ್ವಾಭಿಮಾನಿ ರೈತರ ಕಾರ್ಡ ವಿತರಣೆ ಮಾಡಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಗ್ರಾಮದ ಕೊಪ್ಪಳ ಆಟಿಕೆಗಳ ಕ್ಲಸ್ಟರ್ ಭೂಮಿ ಪೂಜೆ ಸಮಾರಂಭ ವೇದಿಕೆಯ ಪಕ್ಕದಲ್ಲಿ ಶನಿವಾರದಂದು ಕೃಷಿ ಸಂಜೀವಿನಿ 20 ವಾಹನಗಳು ಹಾಗೂ ಸ್ವಾಭಿಮಾನಿ ರೈತರ ಕಾರ್ಡ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೃಷಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ಪಾಟೀಲ್ ಅವರು ಕೃಷಿ ಪರೀಕ್ಷಾ ಉಪಕರಣಗಳ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ಯಮೆಗಳ ಸಚಿವರಾದ ಜಗದೀಶ ಶೆಟ್ಟರ, ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ. ಪಾಟೀಲ್, ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರಾದ ಆನಂದ ಸಿಂಗ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ಕೆ.ರಾಜಶೇಖರ್ ಹಿಟ್ನಾಳ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ ಹಾಲಪ್ಪ ಬಸಪ್ಪ ಆಚಾರ, ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಕೆ.ರಾಘವೇಂದ್ರ ಹಿಟ್ನಾಳ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಮುನಿರಾಬಾದ್ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಬಿ.ಹೆಚ್.ಎಮ್., ಜಿ.ಪಂ. ಉಪಾಧ್ಯಕ್ಷೆ ಬೀನಾ ಗೌಸ್, ಕುಕನೂರು ತಾ.ಪಂ. ಅಧ್ಯಕ್ಷ ಜಗನ್ನಾಥಗೌಡ ಪಾಟೀಲ ಸೇರಿದಂತೆ ಜಿ.ಪಂ., ತಾ.ಪಂ. ಸದಸ್ಯರು, ಜನಪ್ರತಿನಿಧಿಗಳು ಹಾಗೂ ಇತರರು ಉಪಸ್ಥಿತರಿದ್ದರು.


ಶೇರ್‌ ಮಾಡಿ
 •  
 •  
 •  
 •  
 •  
 •  

Leave a Reply

Your email address will not be published. Required fields are marked *